ಚಿತ್ರದುರ್ಗ : ಜಾತಿ, ಧರ್ಮಕ್ಕಿಂತ ಮಾನವೀಯತೆ ಮುಖ್ಯ. ಜಾತ್ಯಾತೀತ ದೇಶದ ಭಾರತದಲ್ಲಿರುವ ಎಲ್ಲಾ ಧರ್ಮಿಯರು
ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆಂದು ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ತಿಳಿಸಿದರು.ಹಿಂದೂ-ಮುಸ್ಲಿಂ-ಕ್ರೈಸ್ತರು, ಧರ್ಮ ಯಾವುದಾದರೇನು? ನಾವು ಮೊದಲು ಭಾರತೀಯರು ಎನ್ನುವ ವಿಚಾರ ಕುರಿತು ಪ್ರವಾಸಿಮಂದಿರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ನೀಡಿದ್ದಾರೆ. ಮುಸ್ಲಿಂರಿಗೆ ಕುರಾನ್,ಹಿಂದೂಗಳಿಗೆ ಭಗವದ್ಗೀತೆ, ಕ್ರೈಸ್ತರಿಗೆ ಬೈಬಲ್ ಇದೆ. ಇವೆಲ್ಲವುಗಳಿಗಿಂತಲೂ ಸಂವಿಧಾನ ದೊಡ್ಡ ಗ್ರಂಥ. ಮತದಾರರುಚುನಾವಣೆಯಲ್ಲಿ ಮತಗಳನ್ನು ಮಾರಿಕೊಳ್ಳದೆ. ಯೋಗ್ಯರನ್ನು ಆಯ್ಕೆ ಮಾಡಿದಾಗ ಸದೃಢ ದೇಶ ಕಟ್ಟಲು ಸಾಧ್ಯ. ಸಂವಿಧಾನವನ್ನುಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಫಾದರ್ ಎಂ.ಎಸ್.ರಾಜು ಮಾತನಾಡಿ ಬಹುಸಂಖ್ಯಾತರಿಂದ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಶೋಷಣೆನಡೆಯುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ಅನೇಕರು ಬಲಿಯಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಹಿಂದುಳಿದವರು, ಅಲ್ಪಸಂಖ್ಯಾತರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೋರಾಟ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲಾಗ್ರಂಥಗಳಿಗಿಂತಲೂ ಸಂವಿಧಾನ ಶ್ರೇಷ್ಟವಾದುದು. ಹಾಗಾಗಿ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕೆಂದು ಮನವಿ ಮಾಡಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಸ್ವಾತಂತ್ರ್ಯವನ್ನು ಅನುಭವಿಸಲುಆಗುತ್ತಿಲ್ಲ.
ಕೋಮುವಾದಿಗಳು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ದೇಶದ ಬಹುತ್ವ ನಾಶಪಡಿಸಲು ಸಂಚುರೂಪಿಸುತ್ತಿರುವವರ ವಿರುದ್ದ ಜಾಗೃತರಾಗಿರಬೇಕೆಂದು ಹೇಳಿದರು.
ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡುತ್ತ ಭಾರತೀಯತೆ ಎನ್ನುವುದು ಬಹುತ್ವದ ಅಡಿಪಾಯವಿದ್ದಂತೆ. ಯಾವುದೇ ಒಂದುದೇಶಕ್ಕೆ ಮೂಲಭೂತವಾದ ಎನ್ನುವುದು ಶಾಪ. ಅತಿಯಾದ ಆಸ್ತಿಕವಾದ ಅವನತಿಯ ಸಂಕೇತ. ಸ್ವಾತಂತ್ರ್ಯ ಪೂರ್ವದ ಭಾರತವೆಬೇರೆ, ಈಗಿನ ಭಾರತವೆ ಬೇರೆ. ದೇಶದಲ್ಲಿ ಸಮಾಜವಾದವನ್ನು ಮತ್ತೆ ಮತ್ತೆ ಬಿತ್ತುವ ಕೆಲಸವಾಗಬೇಕೆಂದರು.ವಿಚಾರ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎ.ಸಾಧಿಕ್‍ವುಲ್ಲಾ ಮಾತನಾಡಿ ಎಲ್ಲಾ ಜಾತಿ ಧರ್ಮಕ್ಕಿಂತ ಭಾರತೀಯತೆ ಎನ್ನುವುದುಮುಖ್ಯ.
ಸಂವಿಧಾನ ಎಲ್ಲಾ ಗ್ರಂಥಗಳಿಗಿಂತಲೂ ಶ್ರೇಷ್ಟವಾದುದು. ರಾಜಕೀಯ ಲಾಭಕ್ಕಾಗಿ ಕೆಲವರು ದೇಶದ ಐಕ್ಯತೆಯನ್ನು ಹಾಳು
ಮಾಡಿ ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ
ಅವಕಾಶವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರ ತ್ಯಾಗ, ಬಲಿದಾನವಿದೆ. ಅಪಾಯದಲ್ಲಿರುವ ಸಂವಿಧಾನವನ್ನು
ಉಳಿಸಿಕೊಳ್ಳುವಲ್ಲಿ ಹೋರಾಡಬೇಕಿದೆ ಎಂದು ತಿಳಿಸಿದರು.ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ನ್ಯಾಯವಾದಿ ದಿಲ್‍ಶಾದ್ ಉನ್ನಿಸಾ, ಪ್ರಸಾರ ಭಾರತಿ ಆಕಾಶವಾಣಿಯಡಾ.ನವೀನ್ ಮಸ್ಕಲ್, ಕರ್ನಾಟಕ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಆರ್.ಗಿರೀಶ್‍ನಾಯ್ಕ ಇನ್ನು ಮುಂತಾದವರು ವಿಚಾರಗೋಷ್ಟಿಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



