ಗಣಿಧಣಿ ಎಂದೇ ಪಡೆದಿರುವ ಶಾಸಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರದ ಮೂಲಕ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ತಮ್ಮ ಪ್ರತಿಭೆ ಸಾಬೀತುಪಡಿಸಲು ರೆಡಿಯಾಗಿದ್ದಾರೆ. ಈಗ ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆ ಆಗಿತ್ತು. ಟೀಸರ್ನಲ್ಲೇ ಭರವಸೆ ಮೂಡಿಸಿದ್ದ ಉದಯೋನ್ಮುಖ ನಟ ಈಗ ತಮ್ಮ ಭರ್ಜರಿ ಡ್ಯಾನ್ಸ್ ಸ್ಟೆಪ್ಸ್ ಮೂಲಕ ಗಮನ ಸೆಳೆದಿದ್ದಾರೆ.
ವೈರಲ್ ವಯ್ಯಾರಿ’ ಸದ್ದು.. ಕಿರೀಟಿ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಬಣ್ಣ ಹಚ್ಚಿರುವ ಚೊಚ್ಚಲ ಚಿತ್ರದ ಟೀಸರ್ ಈಗಾಗಲೇ ಭಾರಿ ಸದ್ದು ಮಾಡಿದೆ. ಇದೀಗ ಸಿನಿಮಾದ ಎರಡನೇ ಹಾಡು ‘ವೈರಲ್ ವಯ್ಯಾರಿ’ ಅನಾವರಣಗೊಂಡಿದ್ದು, ಪ್ರಚಾರ ಜೋರಾಗಿದೆ.
ನಾಯಕ-ನಾಯಕಿಯ ಹೈ-ಲೆವೆಲ್ ಎನರ್ಜಿ:
ಈ ವೈರಲ್ ವಯ್ಯಾರಿ ಹಾಡಿಗೆ ಪವನ್ ಭಟ್ ಸಾಹಿತ್ಯ ಬರೆದಿದ್ದು, ಹರಿಪ್ರಿಯಾ ಮತ್ತು ದೀಪಕ್ ಧ್ವನಿಯಾಗಿದ್ದಾರೆ. ದೇವಿಶ್ರೀ ಪ್ರಸಾದ್ ಮ್ಯೂಸಿಕ್ ಕಿಕ್‌ಗೆ ಕಿರೀಟಿ ಮತ್ತು ಶ್ರೀಲೀಲಾ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಇವರಿಬ್ಬರ ಎನರ್ಜಿ ಹೈ-ಲೆವೆಲ್‌ನಲ್ಲಿದೆ.
ಸಿನಿಮಾ ತಡವಾಗಲು ಕಾರಣ ಇದೇ….:
ಚಿತ್ರದ ಮೊದಲ ‘ಲೆಟ್ಸ್ ಲಿವ್ ದಿಸ್ ಮೊಮೆಂಟ್’ ಸಾಂಗ್ ರಿಲೀಸ್ ಈವೆಂಟ್ನಲ್ಲಿ ಮಾತನಾಡಿದ್ದ ನಾಯಕ ನಟ ಕಿರೀಟಿ, ನಮ್ಮ ಚಿತ್ರಕ್ಕೆ 3 ವರ್ಷ ಹಿಡಿಯಲು ನಾನೇ ಕಾರಣ. ಆ್ಯಕ್ಷನ್ ಸೀನ್ ಸಂದರ್ಭ ನನ್ನ ಬೆನ್ನಿಗೆ ಪೆಟ್ಟು ಬಿದ್ದು ಸರ್ಜರಿಗೆ ಒಳಗಾದೆ. ಹೀಗಾಗಿ 1 ವರ್ಷ ವಿಳಂಬವಾಯಿತು ಎಂದು ತಿಳಿಸಿದ್ದರು.
ಚಿತ್ರತಂಡದ ಕುರಿತು…
ಈ ಬಹುನಿರೀಕ್ಷಿತ ಚಿತ್ರದಲ್ಲಿ ಕಿರೀಟಿ, ಜೆನಿಲಿಯಾ ಡಿಸೋಜಾ, ಶ್ರೀಲೀಲಾ ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಸಿನಿಮಾಗೆ ಆ್ಯಕ್ಷನ್ ಕಟ್ಹೇಳಿದ್ದಾರೆ.ಬಾಹುಬಲಿ, ಆರ್‌ಆರ್‌ಆರ್ ಅಂತಹ ಬ್ಲಾಕ್ಬಸ್ಟರ್ ಸಿನಿಮಾಗಳಿಗೆ ಕ್ಯಾಮರಾ ವರ್ಕ್ಮಾಡಿರುವ ಕೆ.ಕೆ.ಸೆಂಥಿಲ್ ಕುಮಾರ್ ಅವರ ಕ್ಯಾಮರಾ ಕೈಚಳಕ ಈ ಚಿತ್ರದಲ್ಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



