ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗಕ್ಕೆ ಕಳ್ಳರ ಗ್ಯಾಂಗ್ ಎಂಟ್ರಿಯಾಗಿದ್ದು, ಕಳೆದ ವಾರ ಮೆದೆಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ನಾಲ್ವರ ಗ್ಯಾಂಗ್ ಈಗ ಅದೇ ವಿಧ್ಯಾನಗರದ ಈರುಳ್ಳಿ ಮಲ್ಲಪ್ಪ ಲೇಔಟ್ ನಲ್ಲಿ ಪ್ರತ್ಯಕ್ಷವಾಗಿದೆ. ಇಂದು ದಿನ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಇಡೀ ಏರಿಯಾದಲ್ಲಿ ಓಡಾಟ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್, ಬ್ಯಾಗ್ ಹಾಕಿಕೊಂಡು ಕೈಯಲ್ಲಿ ಮಚ್ಚು ಹಿಡಿದು ಓಡಾಟ ನಡೆಸಿದ್ದು,
ಮನೆಗಳ ಸುತ್ತಮುತ್ತ ಸ್ಕೆಚ್ ಹಾಕುತ್ತಿರುವ ದೃಶ್ಯಗಳು ಸೆರೆ ಆಗಿದೆ.
ಕೆಲ ಮನೆಯವರು ಲೈಟ್ ಆನ್ ಮಾಡಿದ್ದಂತೆ ಅಲ್ಲಿಂದ ಓಡಿ ಹೋಗಿದ್ದಾರೆ. ಕಳ್ಳರ ಹಾವಳಿಯಿಂದ ಚಿತ್ರದುರ್ಗ ನಗರದ ಜನತೆ ಆತಂಕಕ್ಕೆ ಒಳಗಾಗಿದ್ದು ಜಾಗ್ರತೆಯಿಂದ ಇರುವಂತೆ ಪೊಲೀಸರ ಮನವಿ ಮಾಡಿದ್ದಾರೆ. ಇನ್ನು ಕಳ್ಳರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



