ಹೊಳಲ್ಕೆರೆ ತಾಲೂಕಿನ ಉಪ್ಪರಿಗೆನಹಳ್ಳಿ ಗ್ರಾಮದಲ್ಲಿ ಮಳೆಗಾಗಿ. ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ ಮಾಡಿಸಿ.. ಮೆರವಣಿಗೆ
ಮಾಡಲಾಯಿತು.ಗ್ರಾಮಕ್ಕೆ ಮಳೆ ಇಲ್ಲದೆ ಜನರ ಜೀವನ ಕಂಗಲಾಗಿದೆ, ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ ಇದ್ದ ಕೊಳವೆಬಾವಿಗಳಲ್ಲಿ ನೀರಿನಪ್ರಮಾಣ ಕಡಿಮೆಯಾಗಿದೆ. ಇದ್ದಲ್ಲದ ಮಧ್ಯೆ ಕರೆಂಟಿನ ಅಭಾವ ಇದೆ. ಕೃಷಿಗೆ ಮಳೇಯ ನೀರೇ ಆಧಾರವಾಗಿದೆ, ಆದರೆ ವರುಣ ಕಣ್ಣುಬಿಡುತ್ತಿಲ್ಲ, ಮಳೆ ಇಲ್ಲೆ ಗ್ರಾಮದ ಜನತೆ ಕಂಗಾಲಾಗಿದ್ದಾರೆ, ಕತ್ತೇಗಳ ಮದುವೆಯನ್ನು ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆಹಿಂದಿನ ಕಾಲದಿಂದಲೂ ಇದೆ ಈ ಹಿನ್ನಲೆಯಲ್ಲಿ ಇಂದು ಉಪ್ಪರಿಗೆನಹಳ್ಳಿ ಗ್ರಾಮದಲ್ಲಿ ಕತ್ತೆಗಳ ಮದುವೆಯನ್ನು ಮಾಡಿ ಗ್ರಾಮದತುಂಬೆಲ್ಲಾ ಮೆರವಣಿಗೆಯನ್ನು ನಡೆಸುವುದರ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತುಈ ಕಾರ್ಯುಕ್ರಮವೂ ಊರಿನ ಗುಡಿ ಗೌಡರಾದ. ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಡೆಸಲಾಯಿತು, ಇದರಲ್ಲಿ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



